Sunday, June 7, 2026
Homeಕರಾವಳಿಕಾಸರಗೋಡು: ಅಂಬ್ಯುಲೆನ್ಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ- ರೋಗಿ ಸಾವು

ಕಾಸರಗೋಡು: ಅಂಬ್ಯುಲೆನ್ಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ- ರೋಗಿ ಸಾವು

- Advertisement -
- Advertisement -

ಕಾಸರಗೋಡು: ಅಂಬ್ಯುಲೆನ್ಸ್ ಮತ್ತು ಕೆ.ಎಸ್. ಆರ್. ಟಿ. ಸಿ ಬಸ್ಸು ನಡುವೆ ಉಂಟಾದ ಅಪಘಾತದಲ್ಲಿ ರೋಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ಕಾಞ0ಗಾಡ್ ಟಿ. ಬಿ ರಸ್ತೆ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಪೆರ್ಮುದೆ ಅಂಚೆ ಕಚೇರಿಯ ಪೋಸ್ಟ್ ಮೆನ್ ಸಾಯಿಬಾಬಾ (54) ಎಂದು ಗುರುತಿಸಲಾಗಿದೆ.

ಉಸಿರಾಟ ತೊಂದರೆ ಉಂಟಾದ ಹಿನ್ನಲೆಯಲ್ಲಿ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ವೈದ್ಯರ ಸಲಹೆಯಂತೆ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕೊಂಡೊಯ್ಯುತ್ತಿದ್ದಾಗ ಈ ಅಪಘಾತ ನಡೆದಿದೆ.

ಅಪಘಾತದ ಬಳಿಕ ತೀವ್ರ ಅಸ್ವಸ್ಥಗೊಂಡ ಸಾಯಿಬಾಬಾ ರವರನ್ನು ,ಕೂಡಲೇ ಜಿಲ್ಲಾಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ. ಇವರ ಜೊತೆಗಿದ್ದ ಕೇಶವ ( 50 ) ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ . ಅಂಬ್ಯುಲೆನ್ಸ್ ನ ಮುಂಭಾಗ ನಜ್ಜುಗುಜ್ಜಾಗಿದೆ. ಹೊಸದುರ್ಗ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!