Friday, June 5, 2026
Homeತಾಜಾ ಸುದ್ದಿರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರ್ಮರಣ, ಇಬ್ಬರಿಗೆ ಗಾಯ

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರ್ಮರಣ, ಇಬ್ಬರಿಗೆ ಗಾಯ

- Advertisement -
- Advertisement -

ಕರ್ನಾಟಕದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಕಿ ಸೇರಿದಂತೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸಿರಿ ಕೃಷ್ಣ ಮತ್ತು ಅಂಕಿತಾ ರೆಡ್ಡಿ ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳು ಕೋಲಾರದ ಕೆಫೆ ಕೇಂದ್ರದಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಇನ್ನೊಂದು ಬದಿಗೆ ದಾಟಿ ಲಾರಿಯಡಿ ಸಿಲುಕಿದೆ. ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಜ್ಜುಗುಜ್ಜಾದ ಕಾರಿನಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಹೊಸಕೋಟೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!