Thursday, June 4, 2026
Homeಕರಾವಳಿಬೆಳ್ತಂಗಡಿಯ ಸುಲ್ಕೇರಿಯ ನಿವೃತ್ತ ವಲಯ ಅರಣ್ಯಾಧಿಕಾರಿ ಲೋಕಯ್ಯ ಪೂಜಾರಿ ನಿಧನ

ಬೆಳ್ತಂಗಡಿಯ ಸುಲ್ಕೇರಿಯ ನಿವೃತ್ತ ವಲಯ ಅರಣ್ಯಾಧಿಕಾರಿ ಲೋಕಯ್ಯ ಪೂಜಾರಿ ನಿಧನ

- Advertisement -
- Advertisement -

ಬೆಳ್ತಂಗಡಿ : ಇಲ್ಲಿನ ಸುಲ್ಕೇರಿ ಗ್ರಾಮದ ನಿವೃತ್ತ ವಲಯ ಅರಣ್ಯಾಧಿಕಾರಿ ಲೋಕಯ್ಯ ಪೂಜಾರಿ(73) ಅವರು ಅಲ್ಪಕಾಲ ಅನಾರೋಗ್ಯದಿಂದಾಗಿ ವಿಧಿವಶರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಅವರನ್ನು ಫೆಬ್ರವರಿ 18 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ನಿಧನರಾಗಿದ್ದಾರೆ.

ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಅವರು ತಮ್ಮ ಸಾಧು ಸ್ವಭಾವದ ಮೂಲಕ ಜನರ ಮನಸ್ಸು ಗೆದ್ದಿದ್ದರು. ಅಲ್ಲದೇ ದಕ್ಷ, ಪ್ರಾಮಾಣಿಕ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ನಿವೃತ್ತರಾದ ಬಳಿಕ ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ ಪ್ರೇಮ, ಪುತ್ರ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ, ಇಬ್ಬರು ಪುತ್ರಿಯರಾದ ಸುರೇಖಾ, ಸುಚಿತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!