Friday, June 5, 2026
Homeತಾಜಾ ಸುದ್ದಿಹಿರಿಯ ನಟ ಕಲಾತಪಸ್ವಿ ರಾಜೇಶ್ ವಿಧಿವಶ

ಹಿರಿಯ ನಟ ಕಲಾತಪಸ್ವಿ ರಾಜೇಶ್ ವಿಧಿವಶ

- Advertisement -
- Advertisement -

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ನಟ, ಕಲಾತಪಸ್ವಿ ರಾಜೇಶ್(86) ಇಹಲೋಕ ತ್ಯಜಿಸಿದ್ದಾರೆ.

ಕಿಡ್ನಿ ವೈಫಲ್ಯ, ತೀವ್ರ ಉಸಿರಾಟ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ರಾಜೇಶ್‌ ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಕೆಲ ದಿನಗಳಿಂದ ರಾಜೇಶ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. 150ಕ್ಕೂ ಹೆಚ್ಚು ಚಿತ್ರಗಳಲ್ಲಿ ರಾಜೇಶ್ ಅಭಿನಯಿಸಿದ್ದಾರೆ. ವಿದ್ಯಾರಣ್ಯಪುರದಲ್ಲಿರುವ ನಿವಾಸದಲ್ಲಿ ಇಂದು ಸಂಜೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.

- Advertisement -

Latest News

error: Content is protected !!