Saturday, June 13, 2026
Homeಕರಾವಳಿಕಡಬ: ಅಕ್ರಮವಾಗಿ ಜಾನುವಾರು ಸಾಗಾಟ, ಆರೋಪಿಗಳಿಗೆ ಜಾಮೀನು ಮಂಜೂರು

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ, ಆರೋಪಿಗಳಿಗೆ ಜಾಮೀನು ಮಂಜೂರು

- Advertisement -
- Advertisement -

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದಾರೆ ಎಂಬ ಆರೋಪದಾಡಿ ಬಂಧಿತರಾಗಿದ್ದ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರುಗೊಂಡಿದೆ.

ಪಿಕಪ್ ಚಾಲಕ ಕೋಡಿಂಬಾಳ ಗ್ರಾಮದ ನಿವಾಸಿ ರವಿ ಹಾಗೂ ಕಡಬ ಗ್ರಾಮದ ಅಬ್ದುಲ್ ಅಜೀಝ್ ಎಂಬವರನ್ನು ಪೊಲೀಸರು ಬಂಧಿಸಿದ್ದರು. ಹಾಗೇ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಕುಟ್ರುಪಾಡಿ ಗ್ರಾಮದ ಕೇಪು ಎಂಬಲ್ಲಿ ಪಿಕಪ್ ವಾಹನದಲ್ಲಿ ಜಾನುವಾರೊಂದನ್ನು ನೆಲ್ಯಾಡಿ ಕಡೆಗೆ ಸಾಗಿಸುತ್ತಿದ್ದರು, ಈ ಸಂದರ್ಭದಲ್ಲಿ ಗಸ್ತು ನಿರತ ಹೊಯ್ಸಳ ಪೋಲಿಸರನ್ನು ಕಂಡ ಕೂಡಲೇ ಪಿಕಪ್ ವಾಹನವನ್ನು ಸಮೀಪದ ಮನೆಯೊಂದಕ್ಕೆ ನುಗ್ಗಿಸಿದ್ದರು.

ಈ ವಿಷಯ ತಿಳಿದು ಗಸ್ತು ನಿರತ ಪೋಲಿಸರು ಪಿಕಪ್, ಜಾನುವಾರು ಹಾಗೂ ಇಬ್ಬರನ್ನು ವಶಕ್ಕೆ ಪಡೆದು ಕರ್ನಾಟಕ ಜಾನುವಾರು ಹತ್ಯೆ ಪ್ರತಿಭಂದಕ ಮತ್ತು ಸಂರಕ್ಷಣಾ ಅದ್ಯಾದೇಶ -2020 ಹಾಗೂ ಕಲಂ ; 66(1) 192(A) IMV ACT-1988 ಯಂತೆ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಅವರಿಗೆ ಜಾಮೀನು ಮಂಜೂರಾಗಿದೆ.

- Advertisement -

Latest News

error: Content is protected !!