Thursday, June 4, 2026
Homeಕರಾವಳಿಹಿರಿಯ ವಿದ್ವಾಂಸ, ಶಿಕ್ಷಣ ತಜ್ಞ, ಭಾಷಾಂತರಕಾರ ಎ.ನರಸಿಂಹ ಭಟ್ ವಿಧಿವಶ

ಹಿರಿಯ ವಿದ್ವಾಂಸ, ಶಿಕ್ಷಣ ತಜ್ಞ, ಭಾಷಾಂತರಕಾರ ಎ.ನರಸಿಂಹ ಭಟ್ ವಿಧಿವಶ

- Advertisement -
- Advertisement -

ಕಾಸರಗೋಡು: ಹಿರಿಯ ವಿದ್ವಾಂಸ, ಶಿಕ್ಷಣ ತಜ್ಞ, ಭಾಷಾಂತರಕಾರ ಎ.ನರಸಿಂಹ ಭಟ್ (92) ಶನಿವಾರ ಮುಂಜಾನೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೂಲತಃ ಅಡ್ಯನಡ್ಕ ನಿವಾಸಿಯಾಗಿದ್ದ ನರಸಿಂಹ ಭಟ್ ಅವರು ಅಧ್ಯಾಪಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿದ್ದು, ಉಪಜಿಲ್ಲಾ ಶಿಕ್ಷಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು.

ಖ್ಯಾತ ಸಾಹಿತಿ ಹಾಗೂ ಶ್ರೇಷ್ಠ ಬರಹಗಾರರಾಗಿದ್ದ ಅವರು ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು. ಮೃತರು ಒಬ್ಬ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

Latest News

error: Content is protected !!