Saturday, June 6, 2026
Homeತಾಜಾ ಸುದ್ದಿಟ್ರಕ್ಕಿಂಗ್ ಗೆ ಹೋಗಿ ಜಾರಿ ಬಿದ್ದು ಸಿಕ್ಕಿಹಾಕಿಕೊಂಡಿದ್ದ ಯುವಕನನ್ನು ಹೆಲಿಕಾಪ್ಟರ್ ಮೂಲಕ ರಕ್ಷಣೆ

ಟ್ರಕ್ಕಿಂಗ್ ಗೆ ಹೋಗಿ ಜಾರಿ ಬಿದ್ದು ಸಿಕ್ಕಿಹಾಕಿಕೊಂಡಿದ್ದ ಯುವಕನನ್ನು ಹೆಲಿಕಾಪ್ಟರ್ ಮೂಲಕ ರಕ್ಷಣೆ

- Advertisement -
- Advertisement -

ಚಿಕ್ಕಬಳ್ಳಾಪುರ: ಟ್ರೆಕ್ಕಿಂಗ್ ಗೆ ಬಂದು ಕಾಲು ಜಾರಿ ಕಡಿದಾದ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಯುವಕನನ್ನು ವಾಯುಪಡೆ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ವೀಕೆಂಡ್ ಹಿನ್ನೆಲೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದೆಹಲಿ ಮೂಲದ ನಿಶಾಂತ್ ಬ್ರಹ್ಮಗಿರಿ ಬೆಟ್ಟಕ್ಕೆ ಹೋಗಿದ್ದಾನೆ. ಈ ಸಂದರ್ಭದಲ್ಲಿ ಆತ ಕಾಲುಜಾರಿ ಬಿದ್ದಿದ್ದ ಆತ ಕಡಿದಾದ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ.

ಕೂಡಲೇ ಜೊತೆಯಲ್ಲಿ ಬಂದಿದ್ದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ ತಕ್ಷಣ ರಕ್ಷಣಾ ಕಾರ್ಯಾರಣೆ ಆರಂಭಿಸಿದ್ದರು. ಬಳಿಕ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಹಗ್ಗದ ಸಹಾಯದಿಂದ ನಿಶಾಂತ್ ನನ್ನು ರಕ್ಷಣೆ ಮಾಡಲಾಗಿದ್ದು, ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!