Tuesday, July 1, 2025
Homeತಾಜಾ ಸುದ್ದಿಸುಳ್ಯ: ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು

ಸುಳ್ಯ: ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಸಾವು

spot_img
- Advertisement -
- Advertisement -

ಸುಳ್ಯ: ವಾರದ ಹಿಂದೆ ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಪಿ.ಯು.ಸಿ. ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಫೆ.20ರಂದು ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17 ) ಎಂದು ಗುರುತಿಸಲಾಗಿದೆ.

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಈಕೆ‌ ವಾರದ ಹಿಂದೆ ಮರ್ಕಂಜದ ಮನೆಗೆ ಬಂದಿದ್ದಳು. ಮನೆಯಲ್ಲಿ ಯಾರು ಇಲ್ಲದ ವೇಳೆ ಇಲಿಪಾಷಣ ಸೇವಿಸಿದ್ದಳೆಂದು ತಿಳಿದು ಬಂದಿದೆ.

ಮನೆಯವರಿಗೆ ವಿಷಯ ತಿಳಿದು ಆಕೆಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ನಿನ್ನೆ ಫೆ.20 ಕೊನೆಯುಸಿರೆಳೆದಳೆಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿನಿ ತಂದೆ, ತಾಯಿ ಸಹೋದರ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!