Thursday, June 4, 2026
Homeತಾಜಾ ಸುದ್ದಿಬೆಂಗಳೂರು: ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಮಾಡಿಸಿರೋದೆ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

ಬೆಂಗಳೂರು: ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಮಾಡಿಸಿರೋದೆ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ

- Advertisement -
- Advertisement -

ಬೆಂಗಳೂರು: ಶಿವಮೊಗ್ಗದಲ್ಲಿನ ಹರ್ಷ ಕೊಲೆಯ ಹಿಂದೆ ಬಿಜೆಪಿಯವರದ್ದೇ ಸಂಚಿದೆ. ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಮಾಡಿಸಿರೋದೆ ಈಶ್ವರಪ್ಪನವರೇ. ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂಬುದಾಗಿ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಪರಿಷತ್ ಸದನ ಆರಂಭವಾಗುತ್ತಿದ್ದಂತೆ ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರು ಶಿವಮೊಗ್ಗದಲ್ಲಿನ ಹರ್ಷ ಹತ್ಯೆಯ ವಿಷಯ ಪ್ರಸ್ತಾಪಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಸಚಿವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡುವಂತೆಯೂ ಆಗ್ರಹಿಸಿದರು.

ಈ ವೇಳೆ ಮಾತನಾಡಿದಂತ ಪರಿಷತ್ ವಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ಕಳೆದ ವರ್ಷ ಹರ್ಷ ತಾಯಿ ನನ್ನ ಮಗ ಭಜರಂಗದಳದ ಕಾರ್ಯಕರ್ತನಲ್ಲ ಎಂಬುದಾಗಿ ಎಸ್ಪಿಗೆ ಮುಚ್ಚಳಿಕೆ ಪತ್ರ ಬರೆದುಕೊಟ್ಟಿದ್ದಾರೆ. ಈಗ ನೋಡಿದ್ರೇ ಕೊಲೆಯಾದ ಹರ್ಷ ಭಜರಂಗದಳದ ಕಾರ್ಯಕರ್ತ ಎನ್ನಲಾಗುತ್ತಿದೆ ಎಂದರು.

ಶಿವಮೊಗ್ಗದಲ್ಲಿನ ಹರ್ಷ ಕೊಲೆಯ ಹಿಂದೆ ಬಿಜೆಪಿಯವರದ್ದೇ ಸಂಚಿದೆ. ಕೂಡಲೇ ಈಶ್ವರಪ್ಪ ರಾಜೀನಾಮೆ ನೀಡಬೇಕು. ಭಜರಂಗದಳದ ಕಾರ್ಯಕರ್ತರನ ಕೊಲೆ ಮಾಡಿಸಿರುವುದೇ ಈಶ್ವರಪ್ಪ ಎಂಬುದಾಗಿ ಗಂಭೀರ ಆರೋಪ ಮಾಡಿದರು.

- Advertisement -

Latest News

error: Content is protected !!