Thursday, June 4, 2026
Homeತಾಜಾ ಸುದ್ದಿಹರ್ಷ ಅವರ ಕುಟುಂಬಕ್ಕೆ 10 ಲಕ್ಷ ರೂ.ಗಳ ನೆರವು ಘೋಷಿಸಿದ ಡಾ.ಸಿ.ಎನ್. ಅಶ್ವತ್ಥನಾರಾಯಣ

ಹರ್ಷ ಅವರ ಕುಟುಂಬಕ್ಕೆ 10 ಲಕ್ಷ ರೂ.ಗಳ ನೆರವು ಘೋಷಿಸಿದ ಡಾ.ಸಿ.ಎನ್. ಅಶ್ವತ್ಥನಾರಾಯಣ

- Advertisement -
- Advertisement -

ಬೆಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ 10 ಲಕ್ಷ ರೂ.ಗಳ ನೆರವು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾತನಾಡಿದ ಅವರು, ಹರ್ಷ ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದು, ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂದಿದ್ದಾರೆ.

ಇನ್ನು ಹರ್ಷನಂತಹ ಒಬ್ಬ ಸೇವಾ ಮನೋಭಾವದ ವ್ಯಕ್ತಿಯನ್ನು ಮೂಲಭೂತವಾದಿಗಳು ಬಲಿ ತೆಗೆದುಕೊಂಡಿದ್ದಾರೆ. ದುಷ್ಕರ್ಮಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

- Advertisement -

Latest News

error: Content is protected !!