Monday, June 8, 2026
HomeWorldಉಕ್ರೇನ್ ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳ‌ ಸುರಕ್ಷತೆಗೆ ಕ್ರಮ: ಸಿಎಂ ಭರವಸೆ

ಉಕ್ರೇನ್ ನಲ್ಲಿರುವ ರಾಜ್ಯದ ವಿದ್ಯಾರ್ಥಿಗಳ‌ ಸುರಕ್ಷತೆಗೆ ಕ್ರಮ: ಸಿಎಂ ಭರವಸೆ

- Advertisement -
- Advertisement -

ಬೆಂಗಳೂರು: ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ಆರಂಭವಾಗಿರುವ ಹಿನ್ನೆಲೆಯಲ್ಲಿ ಉಕ್ರೇನ್ ನಲ್ಲಿ ಇರುವ ರಾಜ್ಯದ ಕೆಲವು ವಿದ್ಯಾರ್ಥಿಗಳ ಸುರಕ್ಷತೆ ಬಗ್ಗೆ ಆತಂಕ ವ್ಯಕ್ಯವಾಗಿದೆ.‌ ಉಕ್ರೇನ್ ನಲ್ಲಿರುವ ವಿದ್ಯಾರ್ಥಿಗಳ ಜೊತೆಗೆ ಸಂಪರ್ಕದಲ್ಲಿದ್ದು, ಅಲ್ಲಿ ಕರ್ನಾಟಕದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಮಾಹಿತಿ ನೀಡಿದ್ದಾರೆ.

ವಿದ್ಯಾರ್ಥಿಗಳ ಜೊತೆ ವಿದೇಶಾಂಗ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿದ್ದು, ಅವರಿಗೆ ಈಗ ಎಲ್ಲಿಗೆ ಬರಬೇಕು ಸುರಕ್ಷಿತ ಸ್ಥಳ ಯಾವುದು ಎಂಬ ಎಲ್ಲಾ ಮಾಹಿತಿ ನೀಡುತ್ತಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ. ವಿದೇಶಾಂಗ ಕಾರ್ಯದರ್ಶಿ ಜೊತೆಗೂ ನಾನು ಕೂಡಾ ಸಂಪರ್ಕ ಮಾಡಲು ಮುಂದಾಗಿದ್ದೇನೆ ಎಂದು ತಿಳಿಸಿರುವ ಸಿಎಂ ಬೊಮ್ಮಾಯಿ‌, ಭಾರತ ಸರ್ಕಾರದ ಜೊತೆ ನಿರಂತರ ಸಂಪರ್ಕದಲ್ಲಿದ್ದು ಕರ್ನಾಟಕದ ವಿದ್ಯಾರ್ಥಿಗಳ ಸುರಕ್ಷತೆ ಕಾಪಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಆದರೆ ಉಕ್ರೇನ್ ನಲ್ಲಿ ತಮ್ಮವರು ಸಮಸ್ಯೆಯಲ್ಲಿ ಸಿಲುಕಿದ್ದಾರೆ ಎಂದು ಈವರೆಗೂ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ.‌

- Advertisement -

Latest News

error: Content is protected !!