Tuesday, April 30, 2024
Homeಕರಾವಳಿಉಡುಪಿಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಆದಾಯದ 10% ವನ್ನು ಗೋಶಾಲೆಗಳಿಗೆ ಮೀಸಲು: ಸಿಎಂಗೆ ಯಶ್‌ಪಾಲ್...

ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಆದಾಯದ 10% ವನ್ನು ಗೋಶಾಲೆಗಳಿಗೆ ಮೀಸಲು: ಸಿಎಂಗೆ ಯಶ್‌ಪಾಲ್ ಸುವರ್ಣ ಮನವಿ

spot_img
- Advertisement -
- Advertisement -

ಉಡುಪಿ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ ಅವರು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿಗಳ ಇಲಾಖೆ ಸಚಿವರಾದ ಶಶಿಕಲಾ ಜೊಲ್ಲೆಯವರಿಗೆ ರಾಜ್ಯದಲ್ಲಿ ಗೋ ಸಂರಕ್ಷಣೆಯ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿರುವ ಗೋಶಾಲೆಗಳಿಗೆ ಆರ್ಥಿಕಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಸರಕಾರ ವಿಶೇಷ ಮುತುವರ್ಜಿ ವಹಿಸಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ 1 0 % ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಈ ಬಾರಿಯ ಬಜೆಟ್‌ನಲ್ಲಿ ಯೋಜನೆ ರೂಪಿಸುವಂತೆ ಮನವಿ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ಗೋಶಾಲೆಗಳಿಗೆ ಆರ್ಥಿಕ ಚೈತನ್ಯ ನೀಡುವ ಉದ್ದೇಶದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯ ಎ ಮತ್ತು ಬಿ ವರ್ಗದ ದೇವಸ್ಥಾನಗಳ ಆದಾಯದ 10 % ವನ್ನು ಗೋಶಾಲೆಗಳಿಗೆ ವಿನಿಯೋಗಿಸಲು ಆದೇಶ ನೀಡಿದರೆ ಕೋಟ್ಯಾಂತರ ರೂಪಾಯಿ ಅನುದಾನದ ಸಂಗ್ರಹವಾಗಲಿದ್ದು ಈ ಮೂಲಕ ಗೋಸಂರಕ್ಷಣೆಯಲ್ಲಿ ನಿರತವಾಗಿರುವ ಗೋಶಾಲೆಗಳ ಅಭಿವೃದ್ಧಿಗೆ ಹಾಗೂ ರಾಜ್ಯ ಸರಕಾರ ಪ್ರತಿ ಜಿಲ್ಲೆಗಳಲ್ಲೂ ಗೋಶಾಲೆಗಳನ್ನು ಆರಂಭಿಸುವ ಯೋಜನೆಗೂ ಸಹಕಾರವಾಗಲಿದೆ ಎಂದು ಪ್ರಕಟಣೆ ಮೂಲಕ ಹೇಳಿದ್ದಾರೆ.

- Advertisement -
spot_img

Latest News

error: Content is protected !!