- Advertisement -
- Advertisement -
ಉಡುಪಿ: ಇಲ್ಲಿನ ಕರಾವಳಿ ಬೈಪಾಸ್ ಬಳಿ ಇಂದು ಬೆಳಗ್ಗೆ ನಡೆದ ಸರಣಿ ವಾಹನ ಅಪಘಾತದಲ್ಲಿ ಎರಡು ಕಾರುಗಳಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾದ ಘಟನೆ
ನಡೆದಿದೆ.
ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರೊಂದು ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸುವ ಭರದಲ್ಲಿ ಈ ಅಪಘಾತ ಸಂಭವಿಸಿದೆ.
ಟೈಲ್ಸ್ ಸಾಗಿಸುತ್ತಿದ್ದ ಲಾರಿಯನ್ನು ಯಾವುದೇ ಯಾವುದೇ ಮುನ್ಸೂಚನೆ ನೀಡದೆ ಅದರ ಚಾಲಕ ಏಕಾಏಕಿ ನಿಧನಗೊಳಿಸಿದ್ದಾನೆ. ಈ ವೇಳೆ ಲಾರಿಗೆ ಢಿಕ್ಕಿ ಹೊಡೆಯುವುದರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎಂದು ತಿಳಿದುಬಂದಿದೆ.
ಕಾರು ರಸ್ತೆಯ ಮಧ್ಯಭಾಗಕ್ಕೆ ಬಂದ ಪರಿಣಾಮ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ. ಇದೇ ಸಂದರ್ಭ ಕುಂದಾಪುರ ಕಡೆಗೆ ಸಾಗುತ್ತಿದ್ದ ಇನ್ನೊಂದು ಕಾರು ಮೊದಲ ಕಾರಿಗೆ ಢಿಕ್ಕಿಯಾಗಿದೆ.
ಉಡುಪಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿದರು. ಕಾರು ಚಾಲಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
- Advertisement -