ಬೈಂದೂರು: ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಿರಿಮಂಜೇಶ್ವರದ ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ನಂತರ ಒಬ್ಬ ವ್ಯಕ್ತಿ ಸಾವನ್ನಪ್ಪಿದರೆ, ಮೂವರು ಗಾಯಗೊಂಡಿದ್ದಾರೆ.
ಬೆಂಗಳೂರಿನ ಆರ್ ವಿಜಯ್ ಅವರ ಪುತ್ರ ಅಕ್ಷಯ್ (23) ಮೃತರು. ತೇಜಸ್ (24), ಪವನ್ (23) ಮತ್ತು ಹರ್ಷ (24) ಗಾಯಗೊಂಡಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಿರಿಮಂಜೇಶ್ವರ ಬಳಿ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಬಳಿಕ ಹೆದ್ದಾರಿಯ ಇನ್ನೊಂದು ಬದಿಗೆ ಹಾರಿದೆ. ಹಿಂಬದಿಯಲ್ಲಿ ಕುಳಿತಿದ್ದ ಅಕ್ಷಯ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗಾಯಾಳುಗಳನ್ನು ಕೂಡಲೇ ಸ್ಥಳೀಯರ ಬೆಂಬಲದೊಂದಿಗೆ ಖಾಸಗಿ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಮೃತರ ಪಾರ್ಥಿವ ಶರೀರವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೈಂದೂರು ಪೊಲೀಸ್ ಉಪನಿರೀಕ್ಷಕ ಪವನ್ ನಾಯಕ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


