Saturday, June 6, 2026
Homeತಾಜಾ ಸುದ್ದಿಇನ್ಮುಂದೆ ಮಾರ್ಚ್‌ 3 ವಿಶ್ವ ಕನ್ನಡ ಸಿನಿಮಾ ದಿನ: ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

ಇನ್ಮುಂದೆ ಮಾರ್ಚ್‌ 3 ವಿಶ್ವ ಕನ್ನಡ ಸಿನಿಮಾ ದಿನ: ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ

- Advertisement -
- Advertisement -

ಬೆಂಗಳೂರು : ಇನ್ಮುಂದೆ ಪ್ರತಿವರ್ಷ ಮಾರ್ಚ್‌ 3ರಂದು ವಿಶ್ವ ಕನ್ನಡ ಸಿನಿಮಾ ದಿನವಾಗಿ ಆಚರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

13ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕನ್ನಡದ ಮೊದಲ ಟಾಕಿ ಚಿತ್ರ ಸತಿ ಸುಲೋಚನೆ ಮಾರ್ಚ್‌ 3ರಂದು ಬಿಡುಗಡೆಯಾಗಿದ್ದು, ಈ ದಿನವನ್ನ ‘ವಿಶ್ವ ಕನ್ನಡ ಸಿನಿಮಾ ದಿನ’ವೆಂದು ರಾಜ್ಯ ಸರ್ಕಾರ ಘೋಷಣೆ ಮಾಡುತ್ತಿದೆ ಎಂದರು.

ಇನ್ನು ಇದೇ ವೇಳೆ ‘ನಟ ಪುನೀತ್ ರಾಜ್ ಕುಮಾರ್ ಅವ್ರಿಗೆ ಶೀಘ್ರದಲ್ಲೇ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮದ ದಿನಾಂಕವನ್ನ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದರು.

- Advertisement -

Latest News

error: Content is protected !!