Sunday, June 14, 2026
Homeಕೊಡಗುಬೈಕ್-ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಬೈಕ್-ಲಾರಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಮಡಿಕೇರಿ: ಕೊಡಗಿನಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಶೇಖರ್ (42) ಸ್ಥಳದಲ್ಲಿಯೇ‌ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಶೇಖರ್ ಪತ್ನಿಗೆ ಗಾಯಗಳಾಗಿದ್ದು, ಪುಟ್ಟ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಸೋಮವಾರಪೇಟೆ ತಾಲೂಕಿನ ಮಾಲಂಬಿ ಕಣಿವೆ ಬಸವನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.‌

ಬೈಕ್ ಕೂಡುಮಂಗಳೂರಿನಿಂದ ಸಕಲೇಶಪುರಕ್ಕೆ ತೆರಳುತ್ತಿದ್ದು,‌ ಹಾಸನ ಜಿಲ್ಲೆಯ ಸಕಲೇಶಪುರದ ತಮ್ಮ ಮನೆಗೆ ಶೇಖರ್ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಕೊಡ್ಲಿಪೇಟೆಯಿಂದ ಕುಶಾಲನಗರಕ್ಕೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!