Tuesday, April 30, 2024
Homeಕರಾವಳಿಉಡುಪಿಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಗೆ 10 ವರ್ಷ ಜೈಲು...

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಆರೋಪಿಗೆ 10 ವರ್ಷ ಜೈಲು ಶಿಕ್ಷೆ

spot_img
- Advertisement -
- Advertisement -

ಉಡುಪಿ: ಏಳು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಬಾಗಲಕೋಟೆಯ ಮಲ್ಲಪ್ಪ ಸಿದ್ದಪ್ಪ ಚಲವಾದಿ(45) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 2015ರಲ್ಲಿ ಉಡುಪಿಯ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಮಲ್ಲಪ್ಪ, ಅಪ್ರಾಪ್ತೆಯನ್ನು ಪುಸಲಾಯಿಸಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರಿಂದ ಆಕೆ ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮ ನೀಡಿದ್ದರು ಎಂದು ದೂರಲಾಗಿದೆ.

ಬಳಿಕ ಆರೋಪಿ ಆಕೆಯನ್ನು ಗೋವಾ ಮುಂತಾದ ಕಡೆಗಳಿಗೆ ಕರೆದುಕೊಂಡು ಹೋಗಿ ನಂತರ ಆಕೆ ಮತ್ತು ಮಗುವನ್ನು ಬಾಗಲಕೋಟೆಯಲ್ಲಿ ಬಿಟ್ಟು ತಲೆ ಮರೆಸಿಕೊಂಡಿದ್ದನು. ಈ ವಿಚಾರ ತಿಳಿದ ಬಾಗಲಕೋಟೆಯ ಮಹಿಳಾ ರಕ್ಷಣಾ ಘಟಕವು ಕೂಡಗಿ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಿತು. ಈ ಪ್ರಕರಣವು ಸ್ಥಳದ ಆಧಾರದ ಮೇಲೆ ಉಡುಪಿ ಮಹಿಳಾ ಠಾಣೆಗೆ ವರ್ಗಾವಣೆಗೊಂಡಿದ್ದು, ಪ್ರಕರಣದ ತನಿಖೆ ಮುಂದುವರೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಪೊಲೀಸ್ ನಿರೀಕ್ಷಕ ನವೀನ್ಚಂದ್ರ ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು. ಒಟ್ಟು 43 ಸಾಕ್ಷಿದಾರರ ಪೈಕಿ 18 ಮಂದಿಯ ವಿಚಾರಣೆ ನಡೆಸಲಾಗಿತ್ತು. ಸಂತ್ರಸ್ತೆ ಯುವತಿ ಸಹಿತ ಪ್ರಮುಖ ಸಾಕ್ಷಿಗಳು ಅಭಿಯೋಜನೆಗೆ ಪರ ಸಾಕ್ಷಿ ನುಡಿದಿದ್ದವು.

- Advertisement -
spot_img

Latest News

error: Content is protected !!