- Advertisement -
![]()
- Advertisement -
ಮಂಗಳೂರು: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಪೋಕ್ಸೋ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.
ಇನ್ನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ರಶೀದ್ ಸಾಹೇಬ್(73), ಮೊಹಮ್ಮದ್ ಆಲಿ(74), ಗ್ರೆಗರಿ ಲಿಯೋನಾರ್ಡ್ ಸಿಕ್ವೇರಾ(62) ಹಾಗೂ ಇಸ್ಮಾಯಿಲ್(41) ಬಂಧಿತರು. ಗ್ರಾಹಕರ ರೀತಿಯಲ್ಲಿ ಬಂದು ಈ ನಾಲ್ವರು ಆರೋಪಿಗಳು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದರು. ಈ ಬಗ್ಗೆ ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


