Thursday, June 4, 2026
Homeಕರಾವಳಿಉಪ್ಪಿನಂಗಡಿ: ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆಯಲ್ಲಿ ಬೆಂಕಿ..!

ಉಪ್ಪಿನಂಗಡಿ: ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆಯಲ್ಲಿ ಬೆಂಕಿ..!

- Advertisement -
- Advertisement -

ಉಪ್ಪಿನಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಹತ್ತಿರ ಹೋಟೆಲೊಂದರ ಹಿಂಭಾಗದಲ್ಲಿರುವ ಸೂರಂಬೈಲ್ ಶಾಂತಾರಾಮ್ ಭಟ್ ಎಂಬವರಿಗೆ ಸೇರಿದ ಅಡಿಕೆ, ತೆಂಗಿನ ಕಾಯಿ ಸಂಗ್ರಹಿಸಿಟ್ಟಿದ್ದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅಡಿಕೆ ಸಿಪ್ಪೆಯಿಂದ ಗೊಬ್ಬರ ತಯಾರಿಸುವ ಯಂತ್ರ ಈ ಕಟ್ಟಡದಲ್ಲಿದ್ದು ನಿನ್ನೆ ಸಂಜೆವರೆಗೂ ಅದರಲ್ಲಿ ಕೆಲಸ ಮಾಡಿದ್ದರು. ಅದರಿಂದ ಹಾರಿರಬಹುದಾದ ಕಿಡಿ ಇಷ್ಟೆಲ್ಲ ಅನಾಹುತಕ್ಕೆ ಕಾರಣವಾಗಿರಬಹುದೆಂದು ಸಂಶಯ ವ್ಯಕ್ತಪಡಿಸಲಾಗಿದೆ.

ಇಂದು ಬೆಳಗಿನ ಜಾವ ಬೆಂಕಿಯು ಮುಗಿಲೆತ್ತರಕ್ಕೆ ಚಾಚಿದ್ದು, ಸರಿಯಾದ ಸಮಯದಲ್ಲಿ ಆಗಮಿಸಿದ ಪುತ್ತೂರು ಅಗ್ನಿಶಾಮಕ ದಳದವರು ಬೆಂಕಿ ಆರಿಸುವಲ್ಲಿ ಯಶಸ್ವಿ ಆದರಾದರೂ ಅಷ್ಟರಲ್ಲೇ ಎಲ್ಲಾ ಸುಟ್ಟು ಕರಕಲಾಗಿದೆ.

- Advertisement -

Latest News

error: Content is protected !!