Saturday, June 6, 2026
Homeತಾಜಾ ಸುದ್ದಿನೆಲಮಂಗಲ: ಸ್ಕೂಟರ್ ಗೆ ಖಾಸಗಿ ಬಸ್ಢಿಕ್ಕಿ ಹೊಡೆದ ಖಾಸಗಿ ಬಸ್; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ...

ನೆಲಮಂಗಲ: ಸ್ಕೂಟರ್ ಗೆ ಖಾಸಗಿ ಬಸ್ಢಿಕ್ಕಿ ಹೊಡೆದ ಖಾಸಗಿ ಬಸ್; ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ನೆಲಮಂಗಲ: ಖಾಸಗಿ ಬಸ್ ವೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೆರೆಕತ್ತಿಗನೂರು ಗ್ರಾಮದ ರಾಮಯ್ಯ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.


ಸ್ಕೂಟರ್ ನಲ್ಲಿ ಯೂಟರ್ನ್ ತೆಗೆದುಕೊಳ್ಳುವ ವೇಳೆ ನೆಲಮಂಗಲ ತಾಲೂಕಿನ ಗುಂಡೇನಹಳ್ಳಿ ಬಳಿ ವೇಗವಾಗಿ ಬಂದ ಖಾಸಗಿ ಬಸ್ ಸ್ಕೂಟರ್ ಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.


ಅಪಘಾತದಿಂದ ಟ್ರಾಫಿಕ್ ಜಾಂ ಉಂಟಾಗಿದ್ದು,ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಚಾರಕ್ಕೆ ಅನುವು ಮಾಡಿದ್ದಾರೆ.
ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪದೇಪದೇ ಅಪಘಾತ ಪ್ರಕರಣಗಳು ಮರುಕಳಿಸುತಿದ್ದು, ರಸ್ತೆ ಅಪಘಾತದಿಂದ ಅಕ್ಕಪಕ್ಕದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ರಸ್ತೆ ಅಗಲೀಕರಣಕ್ಕೆ ಹಾಗೂ ಸರ್ವೀಸ್ ರಸ್ತೆ ಅಪಘಾತ ವಲಯದ ಮಾರ್ಗಸೂಚಿಗಳನ್ನು ನೀಡುವಂತೆ ಸ್ಥಳೀಯರು ಒತ್ತಾಯಿದ್ದಾರೆ

- Advertisement -

Latest News

error: Content is protected !!