Saturday, June 6, 2026
Homeಕರಾವಳಿಮಂಗಳೂರು: ವಿಮಾನ ನಿಲ್ದಾಣದಲ್ಲಿ 25.17 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ

ಮಂಗಳೂರು: ವಿಮಾನ ನಿಲ್ದಾಣದಲ್ಲಿ 25.17 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿ ಪತ್ತೆ

- Advertisement -
- Advertisement -

ಮಂಗಳೂರು: ಎರಡು ಪ್ರತ್ಯೇಕ ಘಟನೆಗಳಲ್ಲಿ, ಇಲ್ಲಿನ ವಿಮಾನ ನಿಲ್ದಾಣದಲ್ಲಿ ನಿಯೋಜಿಸಲಾದ ಕಸ್ಟಮ್ಸ್ ಅಧಿಕಾರಿಗಳು 25.17 ಲಕ್ಷ ರೂಪಾಯಿ ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳನ್ನು ಪತ್ತೆ ಮಾಡಿದ್ದಾರೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ದುಬೈನಿಂದ ಇಲ್ಲಿಗೆ ಆಗಮಿಸಿದ ಪ್ರಯಾಣಿಕರೊಬ್ಬರ ಬಳಿ 17,77,500 ರೂಪಾಯಿ ಮೌಲ್ಯದ 90,000 ಯುಎಇ ದಿರ್ಹಾಮ್‌ಗಳು ಪತ್ತೆಯಾಗಿವೆ.

ಇನ್ನೊಂದು ಪ್ರಕರಣದಲ್ಲಿ ಕೇರಳದ ಪ್ರಯಾಣಿಕರೊಬ್ಬರಿಂದ 7,40,500 ರೂಪಾಯಿ ಮೌಲ್ಯದ 10,000 ಅಮೆರಿಕನ್ ಡಾಲರ್ ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣಗಳಲ್ಲಿ ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.

- Advertisement -

Latest News

error: Content is protected !!