Tuesday, June 9, 2026
Homeಕರಾವಳಿಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ವಿಶೇಷ ಘಟಕ ಸ್ಥಾಪನೆ ಪ್ರಸ್ತಾವನೆ ಇಲ್ಲ : ವಿಧಾನಸಭೆಯಲ್ಲಿ...

ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ತಾಯಿ ಮಕ್ಕಳ ವಿಶೇಷ ಘಟಕ ಸ್ಥಾಪನೆ ಪ್ರಸ್ತಾವನೆ ಇಲ್ಲ : ವಿಧಾನಸಭೆಯಲ್ಲಿ ಆರೋಗ್ಯ ಸಚಿವರ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ತಾಯಿ‌ ಮತ್ತು ಮಕ್ಕಳ ವಿಶೇಷ ಘಟಕವನ್ನು ಸ್ಥಾಪಿಸುವ ಪ್ರಸ್ತಾವನೆ ರಾಜ್ಯ ಸರಕಾರದ ಮುಂದೆ ಇಲ್ಲ ಎಂದು ಅರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ಕಳೆದ ಮೂರು ವರ್ಷಗಳಿಂದ ಸರಾಸರಿ ಹೆರಿಗೆಗಳು 43 ಇದ್ದು, ಕಳೆದ ಮೂರು ವರ್ಷಗಳ ಸರಾಸರಿ ಬೆಡ್ ಆಕ್ಯುಪೆನ್ಸಿ ರೇಟ್ ಶೇಕಡಾ ಇಪ್ಪತ್ತೊಂದರಷ್ಟು ಇರುತ್ತದೆ. ಆದ ಕಾರಣ ಪ್ರತ್ಯೇಕ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮಂಜೂರಾತಿಗೆ ನಿಯಮಗಳಲ್ಲಿ ಅವಕಾಶ ಇರುವುದಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ವಿಧಾನಸಭೆಯಲ್ಲಿ ಉತ್ತರ ನೀಡಿದ್ದಾರೆ.

ಇದೇ ವೇಳೆ ಪುತ್ತೂರು ತಾಲೂಕು ಸಾರ್ವಜನಿಕ ಆಸ್ಪತ್ರೆಯನ್ನು 300 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೆ ಏರಿಸಿ ಕಟ್ಟಡ ನಿರ್ಮಾಣ ಕೈಗೊಳ್ಳಲು ಪ್ರಸ್ತಾವನೆ ಸ್ವೀಕೃತಗೊಂಡಿದ್ದು ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಅರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ತಾಯಿ ಮತ್ತು ಮಕ್ಕಳ ವಿಶೇಷ ಘಟಕ ಆರಂಭಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆಯೇ ಎಂದು ಪುತ್ತೂರು ಶಾಸಕ ಸಂಜೀವ ಮಟಂದೂರು ವಿಧಾನಸಭೆಯಲ್ಲಿ ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದರು

- Advertisement -

Latest News

error: Content is protected !!