Friday, June 5, 2026
HomeWorldಕೆನಡಾ: ಆಟೋ ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವು- ಇಬ್ಬರು ಗಂಭೀರ

ಕೆನಡಾ: ಆಟೋ ಅಪಘಾತದಲ್ಲಿ 5 ಭಾರತೀಯ ವಿದ್ಯಾರ್ಥಿಗಳು ಸಾವು- ಇಬ್ಬರು ಗಂಭೀರ

- Advertisement -
- Advertisement -

ಕೆನಡಾ: ಕೆನಡಾದ ಟೊರೊಂಟೊ ಬಳಿ ರಸ್ತೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೆನಡಾದ ಭಾರತದ ಕಮಿಷನರ್ ಅಜಯ್ ಬಿಸಾರಿಯಾ ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಗಳನ್ನು ಹರ್‌ಪ್ರೀತ್ ಸಿಂಗ್ ( 24), ಜಸ್ಪಿಂದರ್ ಸಿಂಗ್ (21), ಕರಣ್‌ಪಾಲ್ ಸಿಂಗ್( 22), ಮೋಹಿತ್ ಚೌಹಾನ್ ( 23), ಮತ್ತು ಪವನ್ ಕುಮಾರ್ (23) ಎಂದು ಗುರುತಿಸಲಾಗಿದೆ.

ಐವರೂ ಮಾಂಟ್ರಿಯಲ್ ಮತ್ತು ಗ್ರೇಟರ್ ಟೊರೊಂಟೊ ಏರಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ತಂಡವು ಸಹಾಯಕ್ಕಾಗಿ ಸಂತ್ರಸ್ತರ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದೆ. ಟ್ವಿಟರ್‌ನಲ್ಲಿ ಅಜಯ್ ಬಿಸಾರಿಯಾ ಅವರು ಸಂತ್ರಸ್ತರ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!