Friday, June 5, 2026
Homeಕರಾವಳಿಉಡುಪಿಉಡುಪಿ: ಮಾ.21ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಡಿಸಿ ಆದೇಶ

ಉಡುಪಿ: ಮಾ.21ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ: ಡಿಸಿ ಆದೇಶ

- Advertisement -
- Advertisement -

ಉಡುಪಿ: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿನ ನಂತರ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ, ಶಾಂತಿ ಸುವ್ಯವಸ್ಥೆ ಕಾಪಾಡಲು ಮಾರ್ಚ್ 21, ಸಂಜೆ 6 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ಈ ವೇಳೆ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಪ್ರತಿಭಟನೆ, ಮೆರವಣಿಗೆ, ಬ್ಯಾನರ್‌ಗಳನ್ನು ಅಳವಡಿಸುವುದು, ಸಾರ್ವಜನಿಕ ಸಭೆ ಮತ್ತು ಕಾರ್ಯಕ್ರಮಗಳನ್ನು ನಡೆಸುವುದು, ಪಟಾಕಿ ಸಿಡಿಸುವುದು, ದೈಹಿಕ ಹಲ್ಲೆಗೆ ಬಳಸಬಹುದಾದ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಕಾಲೇಜು ಅಥವಾ ಶಾಲಾ ಮುಖ್ಯಸ್ಥರ ಅನುಮತಿಯಿಲ್ಲದೆ ಕ್ಯಾಂಪಸ್‌ನೊಳಗೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಡಿಸಿ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement -

Latest News

error: Content is protected !!