Tuesday, June 9, 2026
Homeಕರಾವಳಿಉಡುಪಿಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಸಹಜ ಸ್ಥಿತಿ

ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಸಹಜ ಸ್ಥಿತಿ

- Advertisement -
- Advertisement -

ಉಡುಪಿ: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತೀರ್ಪು ಬಂದ ನಂತರ ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳು ಆರಂಭವಾಗಿದ್ದು, ಉಡುಪಿ ಸರಕಾರಿ ಪದವಿ ಪೂರ್ವ ಹೆಮ್ಮಕ್ಕಳ ಕಾಲೇಜು ಆವರಣದಲ್ಲಿ ಸಹಜ ಸ್ಥಿತಿ ಇದೆ.

ಬುರ್ಖಾ ಧರಿಸಿ ಕ್ಯಾಂಪಸ್ಸಿನೊಳಗೆ ಬರುತ್ತಿರುವ ವಿದ್ಯಾರ್ಥಿನಿಯರು, ಹಿಜಾಬ್ ತೆಗೆದಿರಿಸಿ ತರಗತಿಗೆ ಹಾಜರಾಗಿದ್ದಾರೆ.

ಆದರೆ ಹಿಜಾಬ್ ಧರಿಸದೆ ತರಗತಿಗೆ ಹೋಗಲ್ಲ ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ವಿದ್ಯಾರ್ಥಿನಿಯರು ಇಂದು ತರಗತಿಗೆ ಗೈರು ಹಾಜರಾಗಿದ್ದಾರೆ.

ಕಾಲೇಜು ಆವರಣಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ.

- Advertisement -

Latest News

error: Content is protected !!