Saturday, June 6, 2026
Homeಅಪರಾಧಕಾಲೇಜು ಸರಿಯಿಲ್ಲವೆಂದು ಮಂಗಳೂರಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ

ಕಾಲೇಜು ಸರಿಯಿಲ್ಲವೆಂದು ಮಂಗಳೂರಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ಮಂಗಳೂರಿನ ಕೊಟ್ಟಾರ ಬಳಿಯ ಪಿಜಿಯಲ್ಲಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಕಾಲೇಜು ಸರಿಯಿಲ್ಲ, ಕಾಲೇಜಿಗೆ ಬೋಧಕರು ಸರಿಯಾಗಿ ಬರುತ್ತಿಲ್ಲ ಎಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮೂಲದ ಭರತ್ ಭಾಸ್ಕರ್ (20) ಆತ್ಮಹತ್ಯೆ ಮಾಡಿಕೊಂಡಿದ್ದು, ಕರಾವಳಿ ಕಾಲೇಜಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯಾಗಿದ್ದನು.‌ ಕರಾವಳಿ ಕಾಲೇಜು ಮಾಲೀಕ ಗಣೇಶ್ ರಾವ್ ಮತ್ತು ಪ್ರಾಧ್ಯಾಪಕ ರಾಹುಲ್ ಮೇಲೆ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ವಾಟ್ಸಾಪ್ ಮೆಸೇಜ್ ಮೂಲಕ ಡೆತ್ ನೋಟ್ ರವಾನಿಸಿದ್ದು, ಪ್ರಾಧ್ಯಾಪಕ ರಾಹುಲ್ ಕಿರುಕುಳ ಬಗ್ಗೆ ಆರೋಪ ಮಾಡಿದ್ದಾನೆ ಎನ್ನಲಾಗಿದೆ.‌ ನಿನ್ನೆ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದು ಇಂದು ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!