Wednesday, June 24, 2026
Homeಕರಾವಳಿಉಡುಪಿಉಪ್ಪಿನಂಗಡಿಯಲ್ಲಿ ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು

ಉಪ್ಪಿನಂಗಡಿಯಲ್ಲಿ ಮತ್ತೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು

- Advertisement -
- Advertisement -

ಪುತ್ತೂರು: ಹೈಕೋರ್ಟ್ ತೀರ್ಪಿನ ಬಳಿಕವೂ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಮತ್ತೆ ಹಿಜಾಬ್ ಧರಿಸಿ ಬಂದಿದ್ದಾರೆ.‌ ಪೂರ್ವ ಸಿದ್ದತಾ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಆಗಮಿಸಿದ್ದರು‌.

ಆದರೆ ಕಾಲೇಜು ಆಡಳಿತ ತರಗತಿ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಬಹಿಷ್ಕರಿಸಿದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಬಳಿ ಜಮಾವಣೆಗೊಂಡಿದ್ದರು.‌

ಬಳಿಕ ಮುಸ್ಲಿಂ ಸಮುದಾಯದ ನಾಯಕರ ಮೂಲಕ ವಿದ್ಯಾರ್ಥಿಗಳ ಮನವೊಲಿಕೆ ಮಾಡಿದ ಕಾಲೇಜು ಆಡಳಿತ ಮಂಡಳಿ ಕ್ಯಾಂಪಸ್ ನಿಂದ ಹೊರ ಕಳುಹಿಸಿದೆ. ಹೀಗಾಗಿ ಪರೀಕ್ಷೆ ಬಹಿಷ್ಕರಿಸಿ ಮನೆಗೆ ವಾಪಾಸ್ ವಿದ್ಯಾರ್ಥಿನಿಯರು ತೆರಳಿದ್ದಾರೆ.

- Advertisement -

Latest News

error: Content is protected !!