Thursday, June 4, 2026
Homeತಾಜಾ ಸುದ್ದಿಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಮುಂದೂಡಿಕೆ

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಮುಂದೂಡಿಕೆ

- Advertisement -
- Advertisement -

ಬೆಂಗಳೂರು: ಮಾರ್ಚ್‌ 30-31 ರಂದು ನಿಗದಿಯಾಗಿದ್ದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಮುಂದೂಡಿಕೆಯಾಗಿದೆ. ವಿಜಯನಗರ ಜಿಲ್ಲೆಯಲ್ಲಿ ಕಾರ್ಯಕಾರಿಣಿ ಸಭೆ ನಿಗದಿಯಾಗಿತ್ತು.

ಮಾರ್ಚ್ 30-31ರಂದು ಸಂಸತ್ತಿನಲ್ಲಿ ಕಡ್ಡಾಯ ಹಾಜರಾತಿಗೆ ಸಂಸದರಿಗೆ ವಿಪ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಸೇರಿದಂತೆ ಸಂಸದರಿಗೆ ಪಾಲ್ಗೊಳ್ಳಲು ಸಾಧ್ಯವಾಗದ ಕಾರಣ ಮುಂದೂಡಿಕೆ ಮಾಡಲಾಗಿದೆ.

ಏಪ್ರಿಲ್ ಎರಡನೇ ವಾರದಲ್ಲಿ ಕಾರ್ಯಕಾರಿಣಿ ಸಭೆ ನಡೆಯುವ ಸಾಧ್ಯತೆ ಇದ್ದು, ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಕೂಡಾ ಪಾಲ್ಗೊಳ್ಳುವ ಸಾಧ್ಯತೆ‌ ಇದೆ ಎಂದು ಹೇಳಲಾಗಿದೆ.

- Advertisement -

Latest News

error: Content is protected !!