Saturday, June 6, 2026
Homeತಾಜಾ ಸುದ್ದಿಎಸ್ ಎಸ್ ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ...

ಎಸ್ ಎಸ್ ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

- Advertisement -
- Advertisement -

ಬೆಂಗಳೂರು: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕೆಎಸ್ ಆರ್ ಟಿಸಿ ಅನುಮತಿ ನೀಡಿದೆ.

ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ರಾಜ್ಯಾದ್ಯಂತ ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಎಸ್ಎಸ್ ಎಲ್ ಸಿ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಕೆಎಸ್ ಆರ್ ಟಿಸಿಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ವಿದ್ಯಾರ್ಥಿಗಳಿಗೆ ಅನುಮತಿ ನೀಡಿ ಕೆಎಸ್ ಆರ್ ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಸುತ್ತೋಲೆ ಹೊರಡಿಸಿದ್ದಾರೆ. ಹೀಗಾಗಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

- Advertisement -

Latest News

error: Content is protected !!