- Advertisement -
- Advertisement -
ಬಳ್ಳಾರಿ : ಇಲ್ಲಿನ ಕುಡತಿನಿ ಬಳಿಯ ಬಿಟಿಪಿಎಸ್ ಆಕ್ಸಿಜನ್ ಪ್ಲಾಂಟ್ ನಲ್ಲಿ ಸ್ಫೋಟ ಸಂಭವಿಸಿದ್ದು , ಮೂವರಿಗೆ ಗಂಭೀರ ಗಾಯವಾಗಿದೆ .
ಆಕ್ಸಿಜನ್ ಫಿಲ್ ಮಾಡುವ ವೇಳೆ ಈ ಘಟನೆ ಸಂಭವಿಸಿದೆ . ಏಕಾಏಕಿ ಬೆಂಕಿ ಹೊತ್ತಿಕೊಂಡು ಕಾರ್ಮಿಕರ ಮೈಗೆಲ್ಲ ಬೆಂಕಿ ಆವರಿಸಿಕೊಂಡಿದೆ .
ಮಾಹಿತಿಯ ಪ್ರಕಾರ ಒಬ್ಬ ಕಾರ್ಮಿಕನ ಸ್ಥಿತಿ ಚಿಂತಾಜನಕವಾಗಿದ್ದು , ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಮಾಡಲಾಗಿತ್ತು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -