Thursday, June 4, 2026
Homeಕರಾವಳಿಮಂಗಳೂರು: ಧಾರ್ಮಿಕ ಸ್ಥಳ ಧ್ವಂಸ ಪ್ರಕರಣ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಕೋಟ...

ಮಂಗಳೂರು: ಧಾರ್ಮಿಕ ಸ್ಥಳ ಧ್ವಂಸ ಪ್ರಕರಣ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು: ಕೋಟ ಶ್ರೀನಿವಾಸ ಪೂಜಾರಿ

- Advertisement -
- Advertisement -

ಮಂಗಳೂರು: ಕಾವೂರಿನ ಬಳಿ ಧಾರ್ಮಿಕ ಸ್ಥಳ ಧ್ವಂಸ ಪ್ರಕರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಿಯಮ 72ರಡಿ ಕಾಂಗ್ರೆಸ್‌ನ ಕೆ. ಹರೀಶ್‌ ಕುಮಾರ್‌, ಕಾವೂರಿನಲ್ಲಿ ಸರ್ವೇ ನಂಬರ್‌ 133ರಲ್ಲಿ ನಿರ್ಮಿಸಿರುವ ಪ್ರಾರ್ಥನಾ ಮಂದಿರವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ ಪೂಜಾರಿ, ಪ್ರಾರ್ಥನಾ ಮಂದಿರ ಧಾರ್ಮಿಕ ಸ್ಥಳ ಸೇರಿದಂತೆ ಯಾವುದೇ ಕಟ್ಟಡ ತೆರವುಗೊಳಿಸಬೇಕಾದರೆ ಸರಕಾರ ಮೊದಲೇ ನೋಟಿಸ್‌ ನೀಡಿರುತ್ತದೆ. ಇದಲ್ಲದೆ ಕಟ್ಟಡ ಕೆಡವಿ ಹಾಕುವ ಸಂದರ್ಭ ಅಲ್ಲಿ ಕಂದಾಯ ಅಥವಾ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಖುದ್ದು ಸ್ಥಳದಲ್ಲಿ ಹಾಜರಿರುತ್ತಾರೆ. ಆದರೆ, ಉದ್ದೇಶಿತ ಮಂಗಳೂರು ಪಾಲಿಕೆ ವ್ಯಾಪ್ತಿಯ ಕಾವೂರು ವಾರ್ಡ್‌ನಲ್ಲಿ ಪ್ರಾರ್ಥನಾ ಮಂದಿರವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಈ ಬಗ್ಗೆ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಲತೀಶ್‌ ಎನ್ನುವಾತನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದರು. ಈ ಪ್ರಕರಣದ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

- Advertisement -

Latest News

error: Content is protected !!