Saturday, June 6, 2026
Homeತಾಜಾ ಸುದ್ದಿಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ

ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಬಿಜೆಪಿ ಮಾಡುತ್ತಿದೆ: ಎಚ್.ಡಿ. ಕುಮಾರಸ್ವಾಮಿ

- Advertisement -
- Advertisement -

ಬೆಂಗಳೂರು: ಬಿಜೆಪಿ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಮಾಡುತ್ತಿದೆ. ರಾಜ್ಯದಲ್ಲಿ ಕೋಮು ದ್ವೇಷ ಹರಡಿಸುವುದೇ ಇವರ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ಹಿಂದೂಗಳ ಜಾತ್ರೆಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿಷೇಧ ಹೇರಿರುವುದು ಅಕ್ಷಮ್ಯ. ಭಾವನಾತ್ಮಕ ವಿಚಾರ ಸೃಷ್ಟಿಸಿ ಜನಸಾಮಾನ್ಯರಲ್ಲಿ ಗೊಂದಲ ಮೂಡಿಸುವುದು ಸರಿಯಲ್ಲ. ಕರಾವಳಿಯಲ್ಲಿದ್ದ ಕೋಮುದ್ವೇಷವನ್ನು ಇವರು ರಾಜ್ಯಾದ್ಯಂತ ಪ್ರಯೋಗಿಸುತ್ತಿದ್ದಾರೆ. ಜನ ಇದನ್ನೆಲ್ಲ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು.

ಉತ್ತರ ಭಾರತದ ಚುನಾವಣಾ ತಂತ್ರಗಾರಿಕೆಯನ್ನು ಬಿಜೆಪಿ ಕರ್ನಾಟಕದಲ್ಲಿ ಪ್ರಯೋಗಿಸುತ್ತಿದೆ. ಶಾಂತಿ, ನೆಮ್ಮದಿಯಿಂದ ಕೂಡಿದ್ದ ಸರ್ವ ಜನಾಂಗದ ಶಾಂತಿಯ ತೋಟ ನಮ್ಮ ಕರ್ನಾಟಕ. ಆದರೆ ಚುನಾವಣೆ ತಂತ್ರಗಾರಿಕೆಯಿಂದಾಗಿ ಇಂತಹ ತೋಟಕ್ಕೆ ಬೆಂಕಿ ಇಡುವ ಪ್ರಯತ್ನ ಬಿಜೆಪಿಯಿಂದ ಆಗುತ್ತಿದೆ ಎಂದು ಹೇಳಿದರು.

- Advertisement -

Latest News

error: Content is protected !!