Saturday, June 13, 2026
Homeತಾಜಾ ಸುದ್ದಿಜೂನ್ 16, 17, 18ರಂದು ಸಿಇಟಿ ಪರೀಕ್ಷೆ

ಜೂನ್ 16, 17, 18ರಂದು ಸಿಇಟಿ ಪರೀಕ್ಷೆ

- Advertisement -
- Advertisement -

ಬೆಂಗಳೂರು: ವೃತ್ತಿಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಯಲಿದೆ‌.

ಜೂನ್ 16ರಂದು ಬೆಳಿಗ್ಗೆ ಜೀವಶಾಸ್ತ್ರ, ಮಧ್ಯಾಹ್ನ ಗಣಿತ, 17ರಂದು ಬೆಳಿಗ್ಗೆ ಭೌತಶಾಸ್ತ್ರ ಮತ್ತು ಮಧ್ಯಾಹ್ನ ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಸಿಇಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿ, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆನ್ ಲೈನ್ ಮೂಲಕವೇ ನಿಗದಿತ ಶುಲ್ಕ ಸಲ್ಲಿಸಲು ಏ.22ರವರೆಗೆ ಅವಕಾಶವಿದೆ.

ಶುಲ್ಕ ಪಾವತಿಸಿದ ನಂತರ, ತಮ್ಮ ಅರ್ಜಿಯಲ್ಲೇನಾದರೂ ಮಾಹಿತಿಯನ್ನು ಪರಿಷ್ಕರಿಸುವುದಿದ್ದರೆ ಅಂಥವರಿಗೇ ಮೇ 2ರಿಂದ 6ವರೆಗೆ ಕಾಲಾವಕಾಶ ಇರಲಿದೆ. ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.

- Advertisement -

Latest News

error: Content is protected !!