Sunday, June 7, 2026
Homeತಾಜಾ ಸುದ್ದಿಎಸ್‌ಎಸ್‌‌ಎಲ್‌‌ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಹೃದಯಾಘಾತ- ಚಿಕಿತ್ಸೆ ಫಲಿಸದೆ ಸಾವು

ಎಸ್‌ಎಸ್‌‌ಎಲ್‌‌ಸಿ ಪರೀಕ್ಷೆ ಬರೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ ಹೃದಯಾಘಾತ- ಚಿಕಿತ್ಸೆ ಫಲಿಸದೆ ಸಾವು

- Advertisement -
- Advertisement -

ಮೈಸೂರು : ಎಸ್‌ಎಸ್‌‌ಎಲ್‌‌ಸಿ ಪರೀಕ್ಷೆಗೆ ಹಾಜರಾಗಿ ಪರೀಕ್ಷೆ ಬರೆಯುತ್ತಿದ್ದ ವೇಳೆ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಒಳಗಾಗಿ ಚಿಕಿತ್ಸೆ ಫಲಕಾರಿಯಾಗಲೇ ಸಾವನ್ನಪ್ಪಿರುವ ಘಟನೆ ಇಂದು ಮೈಸೂರಿನ ಟಿ.ನರಸೀಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ಅನುಶ್ರಿ ಎಂದು ತಿಳಿಸಲಾಗಿದೆ.

ಅನುಶ್ರಿ ಮಾದಾಪುರ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಇಂದು ಪರೀಕ್ಷೆ ಬರೆಯೋದಕ್ಕಾಗಿ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಳು.

ಇನ್ನು ಪರೀಕ್ಷೆ ಬರೆಯುತ್ತಿದ್ದಂತ ಸಂದರ್ಭದಲ್ಲಿ ಅನುಶ್ರೀ ಹೃದಯಾಘಾತಕ್ಕೆ ಒಳಗಾಗಿದ್ದು, ಕೂಡಲೇ ಆಕೆಯನ್ನು ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!