Sunday, June 7, 2026
Homeತಾಜಾ ಸುದ್ದಿಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಕರ್ನಾಟಕ ಭೇಟಿ ರದ್ದು

ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಕರ್ನಾಟಕ ಭೇಟಿ ರದ್ದು

- Advertisement -
- Advertisement -

ಬೆಂಗಳೂರು: ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್ ಕರ್ನಾಟಕ ಭೇಟಿ ರದ್ದಾಗಿದೆ. ಏಪ್ರಿಲ್ 5ರಂದು ಉಭಯ ನಾಯಕರು ರಾಜ್ಯಕ್ಕೆ ಆಗಮಿಸಬೇಕಿತ್ತು. ಆದರೆ ಇಸ್ರೇಲ್ ಪ್ರಧಾನಿ ನಫ್ತಾಲಿ ಬೆನೆಟ್‌ಗೆ ಕೋವಿಡ್ ಸೋಂಕಿ ತಗುಲಿರುವ ಕಾರಣ ಅವರ ಭಾರತ ಭೇಟಿ ರದ್ದಾಗಿದೆ. ಆದ್ದರಿಂದ ನಫ್ತಾಲಿ ಬೆನೆಟ್‌ ಜೊತೆಗಿನ ಮೋದಿ ಕರ್ನಾಟಕ ಪ್ರವಾಸವೂ ರದ್ದುಗೊಂಡಿದೆ.

ಪ್ರಧಾನಮಂತ್ರಿಗಳ ಕಾರ್ಯಾಲಯ ಈ ಕುರಿತು ಕರ್ನಾಟಕ ಸರ್ಕಾರಕ್ಕೆ ಮಾಹಿತಿ ನೀಡಿದೆ. ಏಪ್ರಿಲ್ 5ರಂದು ನಫ್ತಾಲಿ ಬೆನೆಟ್ ಮತ್ತು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ ನೀಡಬೇಕಿತ್ತು.ನರೇಂದ್ರ ಮೋದಿ ಬೆಂಗಳೂರಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಉದ್ಘಾಟಿಸಬೇಕಿತ್ತು. ಬೆಂಗಳೂರು ನಗರದ ಬಹು ನಿರೀಕ್ಷಿತ ಸಬ್ ಅರ್ಬನ್ ರೈಲು ಯೋಜನೆಗೆ ಶಂಕು ಸ್ಥಾಪನೆ ಮಾಡಬೇಕಿತ್ತು.

ಕಳೆದ ವರ್ಷ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಗೆ ಅವರು ಭಾರತ ಪ್ರವಾಸ ಕೈಗೊಂಡಿದ್ದರು.

- Advertisement -

Latest News

error: Content is protected !!