Wednesday, June 24, 2026
Homeಕರಾವಳಿಪುತ್ತೂರಿನಲ್ಲಿ ಆಟೋ ರಿಕ್ಷಾದಲ್ಲೇ ಮಹಿಳೆಯ ಮಾನಭಂಗಕ್ಕೆ ಯತ್ನ: ಆರೋಪಿಯ ಬಂಧನ

ಪುತ್ತೂರಿನಲ್ಲಿ ಆಟೋ ರಿಕ್ಷಾದಲ್ಲೇ ಮಹಿಳೆಯ ಮಾನಭಂಗಕ್ಕೆ ಯತ್ನ: ಆರೋಪಿಯ ಬಂಧನ

- Advertisement -
- Advertisement -

ಪುತ್ತೂರು: ತನ್ನ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಮಾನಭಂಗಕ್ಕೆ ಆಟೋ ಚಾಲಕನೊಬ್ಬ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕುಪಿನೋಪಿನಡ್ಕದ ನಿವಾಸಿಯಾದ ಸಫ್ವಾನ್ ಎಂಬಾತ ತನ್ನ ಪರಿಚಯದ ಮಹಿಳೆಯನ್ನು ಮಾತನಾಡಲು ಇದೆ ಎಂದು ತನ್ನ ಆಟೋದಲ್ಲಿ ಕರೆದುಕೊಂಡು ಹೋಗಿದ್ದಾನೆ. ದರ್ಬೆಯ ಹರ್ಷ ಎಲೆಕ್ಟ್ರಾನಿಕ್ಸ್ ಬಳಿ ತಲುಪುತ್ತಿದ್ದಂತೆ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ್ದಾನೆ. ವಿರೋಧಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ, ಪುತ್ತೂರು ಮಹಿಳಾ ಠಾಣೆಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಆರೋಪಿಯ ಬಂಧಿಸಿರುವ ಪೊಲೀಸರು ಸೆಕ್ಷನ್ 354, 323, 504,506ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!