Monday, June 8, 2026
Homeತಾಜಾ ಸುದ್ದಿಐ.ಪಿ.ಎಸ್. ಸೇವೆಗೆ ಎಡಿಜಿಪಿ ಭಾಸ್ಕರ್ ರಾವ್ ವಿದಾಯ : ರಾಜಕೀಯಕ್ಕೆ ಎಂಟ್ರಿ ಕೊಡಲು ತೆರೆಮರೆಯಲ್ಲಿ ಸಿದ್ಧತೆ

ಐ.ಪಿ.ಎಸ್. ಸೇವೆಗೆ ಎಡಿಜಿಪಿ ಭಾಸ್ಕರ್ ರಾವ್ ವಿದಾಯ : ರಾಜಕೀಯಕ್ಕೆ ಎಂಟ್ರಿ ಕೊಡಲು ತೆರೆಮರೆಯಲ್ಲಿ ಸಿದ್ಧತೆ

- Advertisement -
- Advertisement -

ಬೆಂಗಳೂರು ಎಡಿಜಿಪಿ ಭಾಸ್ಕರ್ ರಾವ್ ಅವರು ತಮ್ಮ ಐ.ಪಿ.ಎಸ್ ಸೇವೆಗೆ ರಾಜೀನಾಮೆ ನೀಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಭಾಸ್ಕರ್ ರಾವ್ ಸ್ಪರ್ಧೆ ಮಾಡಲು ಸಿದ್ಧ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಡಿಜಿಪಿ ಭಾಸ್ಕರ್ ಬೀಳ್ಕೊಡುಗೆ ಸಮಾರಂಭದ ಫೋಟೋ

ಭಾಸ್ಕರ್ ರಾವ್ ಕಳೆದ ವರ್ಷ ಸೆಪ್ಟಂಬರ್ ನಲ್ಲಿ ಸ್ವಯಂ ನಿವೃತ್ತಿಗೆ ಅರ್ಜಿಯನ್ನು ಸಲ್ಲಿಸಿದ್ದರು. 1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದರು. . ಕೆಲವು ತಿಂಗಳ ಹಿಂದೆ ಎಡಿಜಿಪಿ ಸಂಜಯ್ ಸಹಾಯ್ ಅವರೂ ಸ್ವಯಂ ನಿವೃತ್ತಿ ಪಡೆದಿದ್ದರು.

- Advertisement -

Latest News

error: Content is protected !!