Sunday, June 7, 2026
Homeತಾಜಾ ಸುದ್ದಿದೇಶದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ- ಸತತ 13 ದಿನಗಳಿಂದ ನಿರಂತರ ಏರಿಕೆ

ದೇಶದಲ್ಲಿ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ- ಸತತ 13 ದಿನಗಳಿಂದ ನಿರಂತರ ಏರಿಕೆ

- Advertisement -
- Advertisement -

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇಂದು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 13 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 8 ರೂ.ಹೆಚ್ಚಳವಾಗಿದೆ.

ಇಂದು ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್ ಗೆ ತಲಾ 80 ಪೈಸೆ ಹೆಚ್ಚಳವಾಗಿದ್ದು, ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಲೀಟರ್ ಗೆ 80 ಪೈಸೆ ಏರಿಕೆಯಾಗಿದ್ದು, ಪೆಟ್ರೋಲ್ ಲೀಟರ್ ಗೆ 103.41 ರೂ. ಇದ್ದರೆ ಡೀಸೆಲ್ ಲೀಟರ್ ಗೆ 94.67 ರೂ ರೂ. ಗೆ ಮಾರಾಟವಾಗುತ್ತಿದೆ.

ಇನ್ನು ಸ್ಥಳೀಯ ತೆರಿಗೆ ಮತ್ತು ಸಾಗಣೆ ವೆಚ್ಚಗಳಿಂದಾಗಿ ಆಯಾ ಪ್ರದೇಶಗಳಲ್ಲಿ ತೈಲ ಬೆಲೆಯಲ್ಲಿ ಬದಲಾವಣೆಯಾಗುತ್ತಿದ್ದು, ಇತ್ತೀಚಿನ ದರ ಪರಿಷ್ಕರಣೆ ಬಳಿಕ ಪೆಟ್ರೋಲ್, ಡೀಸೆಲ್ ದರ ಕಳೆದ 13 ದಿನಗಳಲ್ಲಿ 8 ರೂ. ನಷ್ಟು ಏರಿಕೆಯಾಗಿದೆ.

- Advertisement -

Latest News

error: Content is protected !!