Thursday, June 4, 2026
Homeಕರಾವಳಿಉಡುಪಿಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ

ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಣೆ

- Advertisement -
- Advertisement -

ಮಂಗಳೂರು: ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗಲು ಬಿಸಿಲು ಕಠಿಣವಾಗಿದ್ದು, ರಾತ್ರಿ ವೇಳೆ ತುಂತುರು ಮಳೆಯಾಗುತ್ತಿದ್ದು, ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಂದು ವಾರ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಸೋಮವಾರ ನಗರದಲ್ಲಿ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 34.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಒಂದು ಡಿಗ್ರಿ ಹೆಚ್ಚಿತ್ತು.

- Advertisement -

Latest News

error: Content is protected !!