Thursday, June 4, 2026
Homeತಾಜಾ ಸುದ್ದಿಶ್ರೀನಗರ: ಶೋಪಿಯಾನ್‌ನಲ್ಲಿ ಕಾಶ್ಮೀರಿ ಪಂಡಿತನ ಮೇಲೆ ಗುಂಡು ಹಾರಿಸಿದ ಉಗ್ರರು

ಶ್ರೀನಗರ: ಶೋಪಿಯಾನ್‌ನಲ್ಲಿ ಕಾಶ್ಮೀರಿ ಪಂಡಿತನ ಮೇಲೆ ಗುಂಡು ಹಾರಿಸಿದ ಉಗ್ರರು

- Advertisement -
- Advertisement -

ಶ್ರೀನಗರ: ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡು ಹಾರಾಟ ನಡೆಸಿರುವ ಘಟನೆ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ನಡೆದಿದೆ. ಬಾಲಕೃಷ್ಣ ಅಲಿಯಾಸ್‌ ಸೋನು (35) ಎಂಬುವರ ಮೇಲೆ ಗುಂಡು ಹಾರಿಸಲಾಗಿದ್ದು, ಅವರನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ಶ್ರೀನಗರದ ಮೈಸು ಮಾ ಎಂಬಲ್ಲಿ ಸಿಆರ್‌ಪಿಎಫ್ ಯೋಧರನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯೋಧರೊಬ್ಬರು ಹುತಾತ್ಮರಾಗಿ ಮತ್ತೊಬ್ಬರು ಶ್ರೀನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತೊಂದೆಡೆ ಪುಲ್ವಾಮಾ ಜಿಲ್ಲೆಯಲ್ಲಿ ಬಿಹಾರದಿಂದ ಕೂಲಿ ಕೆಲಸ ಕ್ಕಾಗಿ ಬಂದಿದ್ದ ಇಬ್ಬರು ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಉಗ್ರರು ಗುಂಡು ಹಾರಿಸಿದ್ದು, ಗಾಯಗೊಂಡಿರುವ ಇಬ್ಬರು ಕಾರ್ಮಿಕರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Latest News

error: Content is protected !!