Saturday, June 6, 2026
Homeಮಹಾನ್ಯೂಸ್ಔರಂಗಬಾದ್ ರೈಲು ದುರಂತ: ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ತಲಾ 5 ಲಕ್ಷ ರೂ....

ಔರಂಗಬಾದ್ ರೈಲು ದುರಂತ: ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಪ್ರಕಟ

- Advertisement -
- Advertisement -

ಮುಂಬೈ : ಮಹಾರಾಷ್ಟ್ರದ ಔರಂಗಬಾದ್ ಬಳಿ ರೈಲ್ವೆ ಹಳಿ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದ ಪರಿಣಾಮ 17 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಏತನ್ಮಧ್ಯೆ, ದುರಂತದಲ್ಲಿ ಮೃತಪಟ್ಟ ದುರ್ದೈವಿಗಳ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರ ತಲಾ 5 ಲಕ್ಷ ರೂ.ಪರಿಹಾರ ಘೋಷಿಸಿದೆ.

ಘಟನೆ ಕುರಿತಂತೆ ಆಘಾತ ವ್ಯಕ್ತಪಡಿಸಿರುವ ಸಿಎಂ ಉದ್ಧವ್ ಠಾಕ್ರೆ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ಘೋಷಿಸಿದ್ದಾರೆ. ಇನ್ನು ಮಧ್ಯಪ್ರದೇಶದ ವಲಸೆ ಕಾರ್ಮಿಕರು ನಡೆದುಕೊಂಡೇ ತಮ್ಮ ಊರು ತಲುಪಲು ನಿರ್ಧರಿಸಿ ರೈಲು ಹಳಿ ಮೇಲೆ ಸಾಗುತ್ತಿದ್ದರು. ನಡೆದು ನಡೆದು ಸುಸ್ತಾಗಿದ್ದ ಪರಿಣಾಮ ಕಳೆದ ರಾತ್ರಿ ರೈಲು ಹಳಿಯ ಮೇಲೆ ಮಲಗಿದ್ದರು. ಇಂದು ಮುಂಜಾನೆ ಔರಂಗಬಾದ್ ಗೆ ತೆರಳುತ್ತಿದ್ದ ಗೂಡ್ಸ್ ರೈಲು ಹಳಿ ಮೇಲೆ ಮಲಗಿದ್ದವರ ಮೇಲೆ ಹರಿದು 17 ಮಂದಿ ಬಲಿಯಾಗಿದ್ದಾರೆ. ಇದೇ ವೇಳೆ, ಘನಟೆಯಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಕ್ಕೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರ ಕೂಡ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದೇ ವೇಳೆ, ಘಟನೆ ಸಂಬಂಧ ತನಿಖೆಗೂ ರೈಲ್ವೆ ಇಲಾಖೆ ಆದೇಶಿಸಿದೆ.

- Advertisement -

Latest News

error: Content is protected !!