Friday, June 5, 2026
Homeಕರಾವಳಿದೇರಳಕಟ್ಟೆಯಲ್ಲಿ ರಸ್ತೆ ವಿಭಜಕ ದಾಟಿ ಬೈಕ್ ಗೆ ಡಿಕ್ಕಿ ಹೊಡೆದ ಕಾರು: ಅಪಘಾತದಲ್ಲಿ ಇಬ್ಬರಿಗೆ ಗಾಯ

ದೇರಳಕಟ್ಟೆಯಲ್ಲಿ ರಸ್ತೆ ವಿಭಜಕ ದಾಟಿ ಬೈಕ್ ಗೆ ಡಿಕ್ಕಿ ಹೊಡೆದ ಕಾರು: ಅಪಘಾತದಲ್ಲಿ ಇಬ್ಬರಿಗೆ ಗಾಯ

- Advertisement -
- Advertisement -

ಮಂಗಳೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ದಾರಿದೀಪಗಳಿಗೆ ಬಡಿದು ರಸ್ತೆ ವಿಭಜಕ ದಾಟಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ನಿನ್ನೆ ರಾತ್ರಿ ದೇರಳಕಟ್ಟೆ ಸಮೀಪ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

 ಕಾರು ಚಾಲಕ ಸೊಫೈಲ್ ಹಾಗೂ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಣಾಜೆ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಮಧ್ಯ ಅಳವಡಿಸಲಾದ ದಾರಿದೀಪದ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಬಳಿಕ ವಿಭಜಕ ಏರಿ ವಿರುದ್ಧ ದಿಕ್ಕಿನಲ್ಲಿ ಚಲಿಸಿದ ಪರಿಣಾಮ ಎದುರಿನಿಂದ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ.

ಘಟನಾ ಸ್ಥಳಕ್ಕೆ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!