Saturday, August 29, 2026
Homeತಾಜಾ ಸುದ್ದಿಕಲ್ಕಡ್ಕ ಪ್ರಭಾಕರ್‌ ಭಟ್ ಸಂಪೂರ್ಣ ಗುಣಮುಖ: ಶ್ರೀರಾಮ ಶಾಲೆ ಕಾರ್ಯಕ್ರಮದಲ್ಲಿ ಭಾಗಿ

ಕಲ್ಕಡ್ಕ ಪ್ರಭಾಕರ್‌ ಭಟ್ ಸಂಪೂರ್ಣ ಗುಣಮುಖ: ಶ್ರೀರಾಮ ಶಾಲೆ ಕಾರ್ಯಕ್ರಮದಲ್ಲಿ ಭಾಗಿ

- Advertisement -
- Advertisement -

ಮಂಗಳೂರು: ಎದೆನೋವಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸಂಪೂರ್ಣ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಕಲ್ಲಡ್ಕದ ಶ್ರೀರಾಮ ವಿದ್ಯಾ ಕೇಂದ್ರಕ್ಕೆ ಆಗಮಿಸಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾಗಿ ಕಲ್ಲಡ್ಕ ಶಾಲೆಗೆ ಆಗಮಿಸಿದ ಆರ್ ಎಸ್ ಎಸ್ ಮುಖಂಡ ಪ್ರಭಾಕರ ಭಟ್, ಕಲ್ಕಡ್ಕ ಶಾಲೆಯ ಪಾಕಶಾಲಾ ಸಮುಚ್ಛಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಳೆದ ಎ.5ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಎದೆ ನೋವಿನ ಕಾರಣದಿಂದ ಕಲ್ಲಡ್ಕ ಭಟ್ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಚೇತರಿಸಿಕೊಂಡು ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ ಭಟ್, ಇಂದು ನೇರವಾಗಿ ಕಲ್ಲಡ್ಕ ಶಾಲೆಯ ಕಾರ್ಯಕ್ರಮದಲ್ಲಿ ಭಾಗಿಯಾದ್ದಾರೆ.

ಶಾಲೆಗೆ ಆಗಮಿಸಿದ ಕಲ್ಕಡ್ಕ ಭಟ್ ಅವರನ್ನು ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ದೀಪ ಬೆಳಗಿಸಿ ಕಲ್ಲಡ್ಕ ಭಟ್ ದಂಪತಿ ಕಾರ್ಯಕ್ರಮ ಉದ್ಘಾಟಿಸಿದರು. ಭಟ್ ಅನಾರೋಗ್ಯ ಹಿನ್ನೆಲೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಆರೋಗ್ಯ ವಿಚಾರಿಸಿದ್ದರು. ಸದ್ಯ ಹೆಚ್ಚು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದಂತೆ ಭಟ್ ಗೆ ವೈದ್ಯರು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!