Thursday, June 4, 2026
Homeತಾಜಾ ಸುದ್ದಿಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾವು

ಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ- ಆರು ಮಂದಿ ಸಾವು

- Advertisement -
- Advertisement -

ಗುಜರಾತ್: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಆರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್‌ನ ಭರೂಚ್ ಜಿಲ್ಲೆಯಲ್ಲಿ ನಡೆದಿದೆ.

ರಿಯಾಕ್ಟರ್‌ ಬಳಿ ಕೆಲಸ ಮಾಡುತ್ತಿದ್ದ ಆರು ಮಂದಿ ಮೃತಪಟ್ಟಿದ್ದು, ದ್ರಾವಕ ಬಟ್ಟಿ ಇಳಿಸುವ ಪ್ರಕ್ರಿಯೆ ವೇಳೆ ರಿಯಾಕ್ಟರ್‌ ಏಕಾಏಕಿ ಸ್ಫೋಟವಾಗಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಲೀನಾ ಪಾಟೀಲ್ ಹೇಳಿದ್ದಾರೆ.

ಇನ್ನು ರಿಯಾಕ್ಟರ್‌ನಲ್ಲಿನ ಸ್ಫೋಟದಿಂದಾಗಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಿಯಾಕ್ಟರ್ ಬಳಿ ಕೆಲಸ ಮಾಡುತ್ತಿದ್ದ ಎಲ್ಲಾ ಆರು ಮಂದಿ ಮೃತಪಟ್ಟಿದ್ದು ಅವರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!