Friday, June 5, 2026
Homeಕರಾವಳಿನಾಳೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ

ನಾಳೆ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಸಿಎಂ ಬೊಮ್ಮಾಯಿ ಭೇಟಿ

- Advertisement -
- Advertisement -

ಬಂಟ್ವಾಳ: ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ‌ನೀಡಲಿದ್ದಾರೆ. ನಾಳೆ ರಾತ್ರಿ 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಪೊಳಲಿಗೆ ಆಗಮಿಸಲಿರುವ ಸಿಎಂ, ರಾತ್ರಿ 8.15ಕ್ಕೆ ದೇವಸ್ಥಾನಕ್ಕೆ ತಲುಪಲಿದ್ದಾರೆ.

ರಾಜರಾಜೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ಸಿಎಂ ಬೊಮ್ಮಾಯಿ ಬಳಿಕ ರಾತ್ರಿ 8.45 ಕ್ಕೆ ರಸ್ತೆ ಮಾರ್ಗವಾಗಿ ಮಂಗಳೂರಿಗೆ ವಾಪಸಾಗಲಿದ್ದಾರೆ. ನಾಳೆ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್. ಈಶ್ವರಪ್ಪ ಕುಟುಂಬ ಸಮೇತ ಪೊಳಲಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದರು.

- Advertisement -

Latest News

error: Content is protected !!