Thursday, June 4, 2026
Homeಕರಾವಳಿಉಡುಪಿಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಸಹಿಸುವುದಿಲ್ಲ : ಉಡುಪಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಸಹಿಸುವುದಿಲ್ಲ : ಉಡುಪಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ

- Advertisement -
- Advertisement -

ಉಡುಪಿ: ರಾಜ್ಯದಲ್ಲಿ ಕಾನೂನು ಕೈಗೆ ತೆಗೆದುಕೊಂಡರೆ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಕಾನೂನು ಸುವ್ಯವಸ್ಥೆ ಮತ್ತು ಸಮಾನತೆ ಎಂಬ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕಳಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ‌

ಉಡುಪಿ ಹೆಲಿಪ್ಯಾಡ್ ನಲ್ಲಿ ಇಂದು ಮಾತನಾಡಿದ ಸಿಎಂ, ಮಂಗಳೂರಿನಲ್ಲಿ ಲವ್ ಜಿಹಾದ್ ಬಗ್ಗೆ ಹಿಂದೂ ಟಾಸ್ಕ್ ಫೋರ್ಸ್ ರಚಿಸಲಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ ಎಲ್ಲದ್ದಕ್ಕೂ ಕಾನೂನಿದೆ. ಮತ್ತು ಕೆಲವು ಕಾನೂನುಗಳನ್ನು ಹಿಂದಿನ ಸರ್ಕಾರಗಳೇ ಮಾಡಿವೆ. ಅವುಗಳನ್ನು ಬಿಟ್ಟು ನಾವು ಹೊಸ ಕಾನೂನು ಮಾಡುತ್ತಿಲ್ಲ. ಕಾನೂನಿನ ಪ್ರಕಾರ ನಡೆಯುವುದು, ಕಾನೂನು ರಕ್ಷಿಸುವುದು ನಮ್ಮ ಕೆಲಸ ಎಂದು ಹೇಳಿದ್ದಾರೆ. ‌

ಅಲ್ಲದೇ, ಯಾವ ಸಂದರ್ಭದಲ್ಲಿ ಏನು ನಿರ್ಧಾರ ತೆಗೆದುಕೊಳ್ಳ ಬೇಕು, ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ನಮಗೆ ತಿಳಿದಿದೆ. ನಮ್ಮ ರಾಜ್ಯ ಶಾಂತಿ ಸುವ್ಯವಸ್ಥೆ ಇರುವ ಅತ್ಯಂತ ಪ್ರಗತಿಪರ ರಾಜ್ಯ. ರಾಜ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕೆಂದು ಗೊತ್ತಿದೆ. ಅದನ್ನು ಮಾಡಿ ತೋರಿಸುತ್ತಿದ್ದೇವೆ ಎಂದು ಸಿಎಂ ಹೇಳಿದ್ದಾರೆ

- Advertisement -

Latest News

error: Content is protected !!