Monday, June 8, 2026
Homeಕರಾವಳಿಉಡುಪಿಉಡುಪಿ: ಡಾ.ವಿ.ಎಸ್.ಆಚಾರ್ಯ ಕೆಎಸ್ ಆರ್ ಟಿಸಿ  ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿದ ಸಿಎಂ

ಉಡುಪಿ: ಡಾ.ವಿ.ಎಸ್.ಆಚಾರ್ಯ ಕೆಎಸ್ ಆರ್ ಟಿಸಿ  ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿದ ಸಿಎಂ

- Advertisement -
- Advertisement -

ಉಡುಪಿ: ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಡಾ.ವಿ.ಎಸ್. ಆಚಾರ್ಯ  ರಾಜ್ಯ ರಸ್ತೆ ಸಾರಿಗೆ ನಿಗಮದ ಗ್ರಾಮಾಂತರ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಉದ್ಘಾಟಿಸಿದರು.

ಬಸ್ ನಿಲ್ದಾಣವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿಯವರು, ಉಡುಪಿಯ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಶಾಸಕ  ಕೆ. ರಘುಪತಿ ಭಟ್ ಇಟ್ಟ ಬೇಡಿಕೆಗಳಾದ ಒಳಚರಂಡಿ ವ್ಯವಸ್ಥೆ ಅಭಿವೃದ್ಧಿಪಡಿಸುವುದು, ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದು ಸೇರಿದಂತೆ ಕೂಸಮ್ಮ ಶಂಭು ಶೆಟ್ಟಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಬಾಕಿ ಇರುವ ಮೊತ್ತವನ್ನು ಪಾವತಿಸುವ ಬೇಡಿಕೆಯನ್ನು ಈಡೇರಿಸುವ ಭರವಸೆ ನೀಡಿದರು.

ಸಾರಿಗೆ  ಸಚಿವ ಶ್ರೀರಾಮುಲು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!