Friday, August 21, 2026
Homeಅಪರಾಧಕುಂದಾಪುರ: ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು, 25 ಸಾವಿರ...

ಕುಂದಾಪುರ: ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು, 25 ಸಾವಿರ ದಂಡ

- Advertisement -
- Advertisement -

ಕುಂದಾಪುರ:  ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಿಕ್ಕಪ್ಪನಿಂದಲೇ ಲೈಂಗಿಕ ದೌರ್ಜನ್ಯ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೇಲಿನ ದೋಷಾರೋಪ ಸಾಬೀತಾದ ಹಿನ್ನೆಲೆ‌ಯಲ್ಲಿ ಆತ ಅಪರಾಧಿಯೆಂದು ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ತೀರ್ಪು ನೀಡಿದ್ದಾರೆ. ಪೋಕ್ಸೋ ಕಾಯ್ದೆಯಡಿಯಲ್ಲಿ 36 ವರ್ಷ ಪ್ರಾಯದ ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, 25 ಸಾವಿರ ದಂಡ ವಿಧಿಸಿದ್ದು ದಂಡ ತೆರಲು ತಪ್ಪಿದಲ್ಲಿ 1 ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ.

ಕುಂದಾಪುರ ಪೊಲೀಸ್ ಉಪವಿಭಾಗದ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ಈ‌ ಪ್ರಕರಣ ಬೆಳಕಿಗೆ ಬಂದಿತ್ತು. 16 ವರ್ಷ ಪ್ರಾಯದ ಬಾಲಕಿಯನ್ನು ಆಕೆಯ ಚಿಕ್ಕಪ್ಪ (ಸಂತ್ರಸ್ತೆ ತಾಯಿಯ ತಂಗಿ ಗಂಡ) ತನ್ನ ಮನೆಯಲ್ಲಿ ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಆಕೆ 7 ತಿಂಗಳ ಗರ್ಭವತಿಯಾದ ಬಳಿಕ ಘಟನೆ ಕುಟುಂಬಿಕರ ಗಮನಕ್ಕೆ ಬಂದಿದ್ದು ವಿಚಾರಿಸಿದಾಗ ಆರೋಪಿ ಚಿಕ್ಕಪ್ಪ ಎಂಬುದಾಗಿ ತಿಳಿದಿತ್ತು. ಆರೋಪಿ ಕೂಲಿ‌ ಕೆಲಸ ಮಾಡಿಕೊಂಡಿದ್ದ.

- Advertisement -

Latest News

error: Content is protected !!