Wednesday, June 3, 2026
Homeಅಪರಾಧಪರೀಕ್ಷೆಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿಗೆ ಮುತ್ತು ಕೊಟ್ಟ ಶಿಕ್ಷಕ: ಪ್ರಕರಣ ದಾಖಲು

ಪರೀಕ್ಷೆಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡುತ್ತೇನೆಂದು ವಿದ್ಯಾರ್ಥಿನಿಗೆ ಮುತ್ತು ಕೊಟ್ಟ ಶಿಕ್ಷಕ: ಪ್ರಕರಣ ದಾಖಲು

- Advertisement -
- Advertisement -

ಹಾವೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಶಿಕ್ಷಕ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.


ಪರಮೇಶ್ ಐರಣಿ (45) ಆರೋಪಿ.ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ಈತ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹಾವೇರಿ ಜಿಲ್ಲೆ ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾದಾಗಿನಿಂದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ. ಪರೀಕ್ಷೆಯಲ್ಲಿ ಹೆಚ್ಚಿಗೆ ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ್ದನು. ಏಪ್ರೀಲ್ 8ರಂದು ನಡೆದಿದ್ದ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

- Advertisement -

Latest News

error: Content is protected !!