ನವದೆಹಲಿ : ಭಾರತದಲ್ಲಿ ಮಾರಕ ಕೊರೊನಾ ವೈರಸ್ ತನ್ನ ರುದ್ರ ನರ್ತನ ಮುಂದುವರೆಸಿದೆ , ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಸೋಂಕಿತರ ಸಂಖ್ಯೆ ದಿನೇದಿನೇ ಏರಿಕೆಯಾಗುತ್ತಲೇ ಇದೆ. ಪರಿಸ್ಥಿತಿ ನಿಯಂತ್ರಣ ನಿಜಕ್ಕೂ ಸವಾಲಾಗಿ ಪರಿಣಮಿಸಿದೆ. ಏತನ್ಮಧ್ಯೆ, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಮತ್ತೆ 3320 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 95 ಮಂದಿ ಡೆಡ್ಲಿ ಕೊರೊನಾಗೆ ಬಲಿಯಾಗಿದ್ದಾರೆ.
ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ 24 ಗಂಟೆಗಳ ಅವಧಿಯಲ್ಲಿ 3320 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ 95 ಮಂದಿ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಇನ್ನು ಒಟ್ಟಾರೆ, ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿತರ ಸಂಖ್ಯೆ 59,662 ಕ್ಕೆ ಏರಿಕೆಯಾಗಿದ್ದು, ಈ ಪೈಕಿ 17,847 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣುಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದೇ ವೇಳೆ, ಸದ್ಯ 39,834 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ವೇಳೆ ಈವರೆಗೆ ದೇಶದಲ್ಲಿ ಡೆಡ್ಲಿ ಕೊರೊನಾಗೆ 1981 ಮಂದಿ ಬಲಿಯಾಗಿದ್ದಾರೆ…